Menu

ಕೀರ್ತನೆಗಳು 100

IRV

1 ಸಮಸ್ತಭೂನಿವಾಸಿಗಳೇ, ಯೆಹೋವನಿಗೆ ಉತ್ಸಾಹಧ್ವನಿಮಾಡಿರಿ. 2 ಯೆಹೋವನನ್ನು ಸಂತೋಷದಿಂದ ಸೇವಿಸಿರಿ; ಕೀರ್ತನೆ ಹಾಡುತ್ತಾ ಆತನ ಸನ್ನಿಧಿಗೆ ಬನ್ನಿರಿ. 3 ಯೆಹೋವನೇ ದೇವರೆಂದು ತಿಳಿದುಕೊಳ್ಳಿರಿ. ನಮ್ಮನ್ನು ಉಂಟುಮಾಡಿದವನು ಆತನೇ; ನಾವು ಆತನವರು, ಆತನ ಪ್ರಜೆಯೂ, ಆತನು ಪಾಲಿಸುವ ಹಿಂಡೂ ಆಗಿದ್ದೇವೆ. 4 ಕೃತಜ್ಞತಾ ಸ್ತುತಿಯೊಡನೆ ಆತನ ಮಂದಿರದ್ವಾರಗಳಿಗೂ, ಸ್ತುತಿಸ್ತೋತ್ರದೊಡನೆ ಆತನ ಅಂಗಳಗಳಿಗೂ ಬನ್ನಿರಿ; ಆತನ ಉಪಕಾರಗಳನ್ನು ಸ್ಮರಿಸಿರಿ; ಆತನ ನಾಮವನ್ನು ಕೊಂಡಾಡಿರಿ. 5 ಯೆಹೋವನು ಒಳ್ಳೆಯವನು; ಆತನ ಕೃಪೆಯು ಯುಗಯುಗಕ್ಕೂ, ಆತನ ಸತ್ಯತೆಯು ತಲತಲಾಂತರಕ್ಕೂ ಇರುವವು.

Everything we make is available for free because of a generous community of supporters.

Donate