Menu

ಕೀರ್ತನೆಗಳು 47

IRV

1 ಸರ್ವಜನಾಂಗದವರೇ, ಚಪ್ಪಾಳೆ ಹೊಡೆಯಿರಿ; ಆರ್ಭಟದಿಂದ ದೇವರಿಗೆ ಜಯಧ್ವನಿ ಮಾಡಿರಿ. 2 ಮಹೋನ್ನತನಾದ ಯೆಹೋವನು ಭಯಂಕರನಾಗಿದ್ದಾನೆ; ಆತನು ಭೂಲೋಕಕ್ಕೆಲ್ಲಾ ಮಹಾರಾಜನು ಆಗಿದ್ದಾನೆ. 3 ಆತನು ಜನಾಂಗಗಳನ್ನು ನಮಗೆ ಅಧೀನಪಡಿಸಿ, ಜನಾಂಗಗಳನ್ನು ನಮ್ಮ ಕಾಲಕೆಳಗೆ ಹಾಕಿದ್ದಾನೆ. 4 ಆತನು ಘನತೆಯುಳ್ಳ ಯಾಕೋಬನ ವಂಶದವರಾದ ನಮ್ಮನ್ನು ಪ್ರೀತಿಸಿ, ನಮ್ಮ ಸ್ವತ್ತನ್ನು ಆಯ್ದುಕೊಂಡಿದ್ದಾನೆ. ಸೆಲಾ 5 ದೇವರು ಜಯಘೋಷದಿಂದ ಏರಿದ್ದಾನೆ; ಯೆಹೋವನು ತುತ್ತೂರಿಯ ಧ್ವನಿಯೊಡನೆ ಆರೋಹಣ ಮಾಡಿದ್ದಾನೆ. 6 ದೇವರನ್ನು ಸಂಕೀರ್ತಿಸಿರಿ, ಸ್ತುತಿಸಿ ಹಾಡಿರಿ; ನಮ್ಮ ಅರಸನನ್ನು ಕೀರ್ತಿಸಿರಿ, ಕೊಂಡಾಡಿರಿ. 7 ಏಕೆಂದರೆ, ದೇವರು ಭೂಲೋಕಕ್ಕೆಲ್ಲಾ ರಾಜನು; ಆತನನ್ನು ಜ್ಞಾನಯುಕ್ತರಾಗಿ ಕೀರ್ತಿಸಿರಿ. 8 ದೇವರು ಸರ್ವಾಧಿಪತ್ಯವನ್ನು ವಹಿಸಿಕೊಂಡಿದ್ದಾನೆ; ಆತನು ತನ್ನ ಪರಿಶುದ್ಧ ಸಿಂಹಾಸನದಲ್ಲಿ ಆಸೀನನಾಗಿದ್ದಾನೆ. 9 ಜನಾಂಗಗಳನ್ನು ಆಳುವ ಪ್ರಭುಗಳು ಅಬ್ರಹಾಮನ ದೇವರ ಪ್ರಜೆಗಳೊಂದಿಗೆ ಸೇರಿಕೊಂಡಿದ್ದಾರೆ; ಏಕೆಂದರೆ ಭೂಪರಲೋಕದ ಗುರಾಣಿಗಳು ದೇವರಿಗೆ ಸೇರಿದವುಗಳೇ. ಆತನೇ ಸರ್ವೋನ್ನತನು.

Everything we make is available for free because of a generous community of supporters.

Donate