Menu

ಕೀರ್ತನೆಗಳು 100

OKCV

1 ಸಮಸ್ತ ಭೂಮಿಯೇ, ಯೆಹೋವ ದೇವರಿಗೆ ಜಯಧ್ವನಿ ಮಾಡಿರಿ. 2 ಸಂತೋಷದಿಂದ ಯೆಹೋವ ದೇವರನ್ನು ಆರಾಧಿಸಿರಿ; ಆನಂದದಿಂದ ಹಾಡುತ್ತಾ ಅವರ ಮುಂದೆ ಬನ್ನಿರಿ. 3 ಯೆಹೋವ ದೇವರೇ ದೇವರೆಂದು ತಿಳುಕೊಳ್ಳಿರಿ; ಅವರೇ ನಮ್ಮನ್ನು ಉಂಟುಮಾಡಿದ್ದಾರೆ; ನಾವು ಅವರ ಜನರೂ, ಅವರು ಮೇಯಿಸುವ ಕುರಿ ಮಂದೆಯೂ ಆಗಿದ್ದೇವೆ. 4 ಕೃತಜ್ಞತೆಯಿಂದ ಅವರ ಬಾಗಿಲುಗಳಿಗೂ, ಕೃತಜ್ಞತಾ ಸ್ತೋತ್ರದಿಂದ ಅವರ ಅಂಗಳಗಳಿಗೂ ಬನ್ನಿರಿ; ಅವರನ್ನು ಕೊಂಡಾಡಿರಿ, ಅವರ ಹೆಸರನ್ನು ಸ್ತುತಿಸಿರಿ. 5 ಯೆಹೋವ ದೇವರು ಒಳ್ಳೆಯವರು, ಅವರ ಕರುಣೆಯು ಯುಗಯುಗಕ್ಕೂ ಇರುವುದು. ಅವರ ಸತ್ಯತೆಯು ತಲತಲಾಂತರಕ್ಕೂ ಮುಂದುವರಿಯುವುದು.

Everything we make is available for free because of a generous community of supporters.

Donate