Menu

ಕೀರ್ತನೆಗಳು 120

OKCV

1 ನನ್ನ ಇಕ್ಕಟ್ಟಿನಲ್ಲಿ ನಾನು ಯೆಹೋವ ದೇವರಿಗೆ ಕೂಗಿದೆನು; ಅವರು ನನಗೆ ಉತ್ತರಕೊಟ್ಟರು. 2 ಯೆಹೋವ ದೇವರೇ, ನನ್ನ ಪ್ರಾಣವನ್ನು ಸುಳ್ಳು ತುಟಿಯಿಂದಲೂ, ಮೋಸದ ನಾಲಿಗೆಯಿಂದಲೂ ಬಿಡಿಸಿರಿ. 3 ಮೋಸದ ನಾಲಿಗೆಯೇ, ದೇವರು ನಿನಗೆ ಏನು ಕೊಡಬೇಕು? ಯಾವ ಹೆಚ್ಚಿನ ಶಿಕ್ಷೆಯನ್ನು ಒದಗಿಸಬೇಕು? 4 ಪರಾಕ್ರಮಶಾಲಿಯ ಹದವಾದ ಬಾಣಗಳು ಮತ್ತು ಜಾಲಿ ಮರದ ಕೆಂಡಗಳಿಂದ ನಿನಗೆ ಶಿಕ್ಷೆಯಾಗುವುದು. 5 ಅಯ್ಯೋ, ನಾನು ಮೆಷೆಕಿನಲ್ಲಿ ತಂಗಬೇಕಲ್ಲಾ! ಕೇದಾರಿನ ಗುಡಾರಗಳ ಬಳಿ ವಾಸಮಾಡುತ್ತೇನೆ. 6 ನಾನು ಸಮಾಧಾನವನ್ನು ವಿರೋಧಿಸುವವರ ಮಧ್ಯದಲ್ಲಿ ಬಹುಕಾಲ ಜೀವಿಸಬೇಕಾಯಿತು. 7 ನಾನು ಶಾಂತಿ ಪ್ರಿಯನು; ಆದರೆ ನಾನು ಮಾತಾಡಿದರೆ ಅವರು ಯುದ್ಧಕ್ಕೆ ಬರುತ್ತಾರೆ.

Everything we make is available for free because of a generous community of supporters.

Donate